-
ಎಜ್ರ 1:1-3ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
1 ಪರ್ಶಿಯ ರಾಜ ಕೋರೆಷ+ ಆಳ್ತಿದ್ದ ಮೊದಲ್ನೇ ವರ್ಷದಲ್ಲಿ ಯೆಹೋವನು ರಾಜ ಕೋರೆಷನ ಮನಸ್ಸನ್ನ ಪ್ರಚೋದಿಸಿದನು. ಒಂದು ಸಂದೇಶವನ್ನ ರಾಜ ಕೋರೆಷ ಇಡೀ ರಾಜ್ಯಕ್ಕೆ ಸಾರೋ ತರ ಮಾಡಿದನು. ಯೆರೆಮೀಯನ ಮೂಲಕ ಹೇಳಿಸಿದ ತನ್ನ ಮಾತುಗಳು+ ನಿಜ ಆಗಬೇಕು ಅಂತ ಯೆಹೋವ ಹೀಗೆ ಮಾಡಿದನು. ರಾಜ ಆ ಸಂದೇಶವನ್ನ ಪತ್ರಗಳ ಮೂಲಕ ಕೂಡ ಕಳಿಸಿದ.+ ಅದ್ರಲ್ಲಿ ಹೀಗಿತ್ತು:
2 “ಪರ್ಶಿಯ ರಾಜ ಕೋರೆಷ ಅನ್ನೋ ನಾನು ಹೇಳೋದು ಏನಂದ್ರೆ ‘ಸ್ವರ್ಗದ ದೇವರಾದ ಯೆಹೋವ ಭೂಮಿ ಮೇಲಿರೋ ಎಲ್ಲ ರಾಜ್ಯಗಳನ್ನ ನನಗೆ ಕೊಟ್ಟಿದ್ದಾನೆ.+ ಯೆಹೂದ ದೇಶದ ಯೆರೂಸಲೇಮ್‌ನಲ್ಲಿ ಆತನಿಗಾಗಿ ಒಂದು ಆಲಯ ಕಟ್ಟಿಸಬೇಕಂತ ನನಗೆ ಆಜ್ಞೆ ಕೊಟ್ಟಿದ್ದಾನೆ.+ 3 ಆತನಿಗೆ ಸೇರಿದ ಜನ ನಿಮ್ಮಲ್ಲಿ ಯಾರಾದ್ರೂ ಇದ್ದಾರಾ? ಇದ್ರೆ ಅವ್ರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಬೇಕು. ಇಸ್ರಾಯೇಲಿನ ದೇವರಾದ ಯೆಹೋವನ ಆಲಯವನ್ನ ಪುನಃ ಕಟ್ಟಬೇಕು. ಅವ್ರ ದೇವರು ಅವ್ರ ಜೊತೆ ಇರ್ತಾನೆ. ಆತನೇ ಸತ್ಯ ದೇವರು. ಯೆರೂಸಲೇಮಲ್ಲಿ ಆತನ ಆಲಯ ಇತ್ತು.*
-