ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • wp23 ನಂ. 1 ಪು. 5
  • ದೇವರಿಗೆ ನಿಮ್ಮ ಬಗ್ಗೆ ಕಾಳಜಿ ಇದೆ.

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ದೇವರಿಗೆ ನಿಮ್ಮ ಬಗ್ಗೆ ಕಾಳಜಿ ಇದೆ.
  • ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2023
  • ಅನುರೂಪ ಮಾಹಿತಿ
  • ಸಹಾಯ‘ಸಾಂತ್ವನದ ದೇವರಿಂದ’
    ಎಚ್ಚರ!—2009
  • ನನಗೆ ಸಾಯಬೇಕು ಅಂತ ಅನಿಸ್ತಿದೆ—ಇದ್ರಿಂದ ಹೊರಗೆ ಬರೋಕೆ ಬೈಬಲ್‌ ಸಹಾಯ ಮಾಡುತ್ತಾ?
    ನಿಮ್ಮ ಪ್ರಶ್ನೆಗಳಿಗೆ ಬೈಬಲಿನ ಉತ್ತರ
  • ಪರಿಪೂರ್ಣ ಮಾನಸಿಕ ಆರೋಗ್ಯ—ದೇವರ ಆಶೀರ್ವಾದ
    ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2023
  • ಲೋಕದಲ್ಲಿರೋ ಮಾನಸಿಕ ಆರೋಗ್ಯದ ಬಿಕ್ಕಟ್ಟು
    ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2023
ಇನ್ನಷ್ಟು
ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2023
wp23 ನಂ. 1 ಪು. 5
ಯುವ ವ್ಯಕ್ತಿ ಒಬ್ಬ ತನ್ನ ಬೆಡ್‌ ಹತ್ತಿರ ನೆಲದ ಮೇಲೆ ಕೂತ್ಕೊಂಡು ಬೈಬಲ್‌ ಓದುತ್ತಾ ಇದ್ದಾನೆ.

ದೇವರಿಗೆ ನಿಮ್ಮ ಬಗ್ಗೆ ಕಾಳಜಿ ಇದೆ

ಬೈಬಲ್‌ನಲ್ಲಿ ತುಂಬ ಒಳ್ಳೇ ಸಲಹೆಗಳಿವೆ. ಯಾಕಂದ್ರೆ ಅವನ್ನ ಕೊಟ್ಟಿರೋದು ನಮ್ಮನ್ನ ಸೃಷ್ಟಿ ಮಾಡಿರೋ ದೇವರು. ಹಾಗಂತ ಇದು ಆರೋಗ್ಯನ ಚೆನ್ನಾಗಿ ನೋಡ್ಕೊಳ್ಳೋಕೆ ಇರೋ ಒಂದು ಪುಸ್ತಕ ಅಲ್ಲ. ಆದ್ರೂ, ಜೀವನದಲ್ಲಿ ಸಮಸ್ಯೆಗಳು ಬಂದಾಗ, ಸರಿಯಾಗಿ ಯೋಚನೆ ಮಾಡೋಕೆ ಆಗದೆ ಇದ್ದಾಗ, ಕಹಿ ನೆನಪುಗಳು ನಮ್ಮನ್ನ ಕಾಡಿದಾಗ, ಶಾರೀರಿಕ ಹಾಗೂ ಮಾನಸಿಕ ಆರೋಗ್ಯದ ಸಮಸ್ಯೆಗಳು ಬಂದಾಗ ಏನು ಮಾಡಬೇಕು ಅಂತ ಸಲಹೆಗಳು ಅದ್ರಲ್ಲಿದೆ.

ನಮ್ಮನ್ನ ಸೃಷ್ಟಿ ಮಾಡಿರೋ ಯೆಹೋವ ದೇವರುa ನಮ್ಮ ಯೋಚನೆ ಮತ್ತು ಭಾವನೆಗಳನ್ನ ಎಲ್ಲರಿಗಿಂತ ಚೆನ್ನಾಗಿ ಅರ್ಥಮಾಡ್ಕೊಳ್ತಾನೆ ಅಂತ ಬೈಬಲ್‌ ಹೇಳುತ್ತೆ. ಸಮಸ್ಯೆಗಳು ಬಂದಾಗ ನಮಗೆ ಸಹಾಯ ಮಾಡೋಕೆ ಆತನು ಕಾಯ್ತಾ ಇರ್ತಾನೆ. ಉದಾಹರಣೆಗೆ, ಬೈಬಲಿನಲ್ಲಿರೋ ಈ ಎರಡು ಮಾತುಗಳು ನಮಗೆ ನೆಮ್ಮದಿ ಕೊಡುತ್ತೆ:

“ಹೃದಯ ಒಡೆದು ಹೋಗಿರೋರಿಗೆ ಯೆಹೋವ ಹತ್ರಾನೇ ಇರ್ತಾನೆ, ಮನಸ್ಸು ಚೂರುಚೂರಾಗಿ ಹೋಗಿರೋರನ್ನ ಆತನು ಕಾದು ಕಾಪಾಡ್ತಾನೆ.”​—ಕೀರ್ತನೆ 34:18.

“ನಾನು, ನಿನ್ನ ದೇವರಾದ ಯೆಹೋವ, ನಿನ್ನ ಬಲಗೈಯನ್ನ ಹಿಡ್ಕೊಂಡಿದ್ದೀನಿ, ‘ಹೆದರಬೇಡ, ನಾನು ನಿನಗೆ ಸಹಾಯ ಮಾಡ್ತೀನಿ’ ಅಂತ ನಾನೇ ನಿನಗೆ ಹೇಳ್ತಿದ್ದೀನಿ.”​—ಯೆಶಾಯ 41:13.

ಮಾನಸಿಕ ಆರೋಗ್ಯದ ಸಮಸ್ಯೆಗಳು ಬಂದಾಗ ಯೆಹೋವ ದೇವರು ನಮಗೆ ಹೇಗೆಲ್ಲಾ ಸಹಾಯ ಮಾಡ್ತಾನೆ ಅಂತ ಮುಂದಿನ ಲೇಖನಗಳಲ್ಲಿ ನೋಡಿ.

a ಯೆಹೋವ ಅನ್ನೋದು ದೇವರ ಹೆಸರು.—ಕೀರ್ತನೆ 83:18.

    ಕನ್ನಡ ಪ್ರಕಾಶನಗಳು (1987-2025)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2025 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ